"ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿ : ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಬಿ. ಈರಯ್ಯ ಆಯ್ಕೆ "

 ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿ: ಬೆಂಗಳೂರು ವಿಶ್ವವಿದ್ಯಾಲಯದ  ಪ್ರಾಧ್ಯಾಪಕ ಡಾ.ಬಿ. ಈರಯ್ಯ ಆಯ್ಕೆ



ಬೆಂಗಳೂರು: ಅ,9: 2023 ನೇ ವರ್ಷದ ಜಾಗತಿಕ ಉನ್ನತ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಿ. ಈರಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.


ಅಮೇರಿಕಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಮತ್ತು ನೆದರ್ ಲ್ಯಾಂಡಿನ ಎಲ್ಸೆವಿಯರ್ ಪ್ರಕಾಶನ  ಸಂಸ್ಥೆಯ 2023 ನೇ ಜಾಗತಿಕ ಮಟ್ಟದ ಉನ್ನತ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ Glass Science and Technology

(ಗಾಜಿನ ವಿಜ್ಞಾನ ಮತ್ತು ತಂತ್ರಜ್ಞಾನ)ದ ಕ್ಷೇತ್ರದಲ್ಲಿನ ಸಂಶೋಧನೆಗಾಗಿ 2023 ನೇ ವರ್ಷದ ವಿಶ್ವದ ಉನ್ನತ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ.


ಪ್ರತಿವರ್ಷ ಸೈಟೇಷನ್ ಇಂಡೆಕ್ಸ್‌ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ, ಶ್ರೇಷ್ಠ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಕಲ್ಪಿಸುತ್ತದೆ.


ಈ ಭಾರಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಿ. ಈರಯ್ಯ ಅವರು ಅಂತರಾಷ್ಟ್ರೀಯವಾಗಿ ಪ್ರಕಟವಾದ 145 ಸಂಶೋಧನಾ ಪ್ರಕಟಣೆಗಳು,1653 ಸೈಟೇಷನ್, 24 ಹೆಚ್ ಇಂಡೆಕ್ಸ್), 37 ಐ 10 ಇಂಡೆಕ್ಸ್ (i 10-index), (Glass Science and Technology) ಗಾಜಿನ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಇವರು 145 ಸಂಶೋಧನಾ ಲೇಖನಗಳನ್ನು ಪ್ರಕಟಣೆಗೆ ವಿಶ್ವ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ.

ವರದಿ :ಡಾ.ಆರ್. ನಾಗರಾಜು
ಸಾಹಿತಿಗಳು ಹಾಗೂ ಸಂಸ್ಕೃತಿ ಚಿಂತಕರು 
Image Description

Post a Comment

0 Comments