*ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ: ಚರ್ಚಾ ಸ್ಪರ್ಧೆಯಲ್ಲಿ ಸಾವಿತ್ರಿ ಮಾಳಿ ಪ್ರಥಮ*
*ರಾಯಬಾಗ:* ಪಕ್ಕದ ಅಥಣಿ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಇತ್ತೀಚೆಗೆ ನೆರವೇರಿತು. ಚರ್ಚಾ ಸ್ಪರ್ಧೆಯಲ್ಲಿ ಇಲ್ಲಿನ ಸಮೀಪದ ಚಿಕ್ಕೂಡ ಸರಕಾರಿ ಪ್ರೌಢ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಕು. ಸಾವಿತ್ರಿ ಮಾಳಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆಂದು ಮುಖ್ಯೋಪಾಧ್ಯಾಯ ಆರ್.ಎಮ್.ಪಾಟೀಲ ತಿಳಿಸಿದ್ದಾರೆ.ಮಿಮಿಕ್ರಿ ಸ್ಪರ್ಧೆಯಲ್ಲಿ ಕುಂತಿನಾಥ ಅಣ್ಣಪ್ಪ ಹರವಿ ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದು ಎಸ್.ಡಿ.ಎಮ್.ಸಿ ಅಧ್ಯಕ್ಷ ಲಕ್ಷ್ಮಣ ಪಾಟೀಲ ˌ ಎಸ್.ಡಿ.ಎಮ್.ಸಿ ಸದಸ್ಯರುˌಶಿಕ್ಷಕರು ˌಊರಿನ ಪ್ರಮುಖರುˌಯುವಕರುˌವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
*ವರದಿ:ಡಾ.ಜಯವೀರ ಎ.ಕೆ.*
*ಖೇಮಲಾಪುರ*
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments