ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು : ಸಾಹಿತಿ ಡಾ.ಹೊಂಬಯ್ಯ ಹೊನ್ನಲಗೆರೆ
ಚಿಕ್ಕೋಡಿ : ಜಗತ್ತು ಸ್ಪರ್ಧಾಮನೋಭಾವದಲ್ಲಿ ಮುನ್ನುಗುತ್ತಿದೆ. ದಿನಗಳು ಕಳೆದಂತೆ ಪ್ರತಿಯೊಬ್ಬರ ಜೀವನದಲ್ಲೂ ಸ್ಪರ್ಧೆ ಹೆಚ್ಚಾಗುತ್ತಿದೆ. ಈ ನಾಗಾ ಲೋಟದ ಸ್ಪರ್ಧ ಜಗತ್ತಿನಲ್ಲಿ ವಿದ್ಯಾರ್ಥಿಗಳು ತಮ್ಮ ಅಸ್ತಿತ್ವವನ್ನು ಪಡೆದುಕೊಳ್ಳಬೇಕಾದರೆ ಮೊದಲು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಲಠ್ಠೆ ಶಿಕ್ಷಣ ಸಂಸ್ಥೆಯ ಶ್ರೀಮತಿ ಕುಸುಮಾವತಿ ಮಿರ್ಜಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥರು ಮತ್ತು ಸಾಹಿತಿಗಳಾದ ಡಾ.ಹೊಂಬಯ್ಯ ಹೊನ್ನಲಗೆರೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಚಿಕ್ಕೋಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2023-2024ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಕ್ರೀಡೆ ಎನ್ಎಸ್ಎಸ್ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಮತ್ತು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿಯಮಾತನಾಡಿದರು.
ವಿದ್ಯಾರ್ಥಿಯ ಜೀವನದಲ್ಲಿ ಪಠ್ಯಕ್ರಮದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ಸಾಂಸ್ಕೃತಿಕ ಚಟುವಟಿಕೆಯಿಂದ ವಿದ್ಯಾರ್ಥಿಯು ತನ್ನ ಅಂತಶಕ್ತಿಯಲ್ಲಿ ಒಳಗೊಂಡಿರುವ ಪ್ರತಿಭೆಯನ್ನು ವರ ತೆಗೆದು ಪ್ರತಿಭೆಗೆ ಪುರಸ್ಕಾರವನ್ನು ಸಿಗುವಂತೆ ಮಾಡುವುದೇ ಸಾಂಸ್ಕೃತಿಕ ವಿಭಾಗದ ಬಹಳ ಮುಖ್ಯವಾದ ಕೆಲಸ. ಇದರಿಂದ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯು ರಾಜ್ಯದಿಂದ ರಾಷ್ಟ್ರಮಟ್ಟಕ್ಕೆ ಉತ್ತಮ ಸಾಂಸ್ಕೃತಿಕ ಪಟುವಾಗಿ ಬೆಳೆಯಲು ಕಾರಣವಾಗುತ್ತದೆ.
ವಿದ್ಯಾರ್ಥಿಗಳು ಕ್ರೀಡಾಮನೋಭಾವವವನ್ನು ಕೊಳ್ಳಬೇಕು. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕಾದರೆ ಕ್ರೀಡೆ ಅತ್ಯಂತ ಪ್ರಮುಖ. ಕಾಲೇಜು ಹಂತಗಳಲ್ಲಿ ಕ್ರೀಡಾಧಿಕಾರಿ ನೀಡುವ ತರಬೇತಿಯನ್ನು ಪಡೆದು ಸರ್ಕಾರದ ವಿವಿಧ ಹುದ್ದೆಗಳನ್ನು ಪಡೆಯಲು ಕ್ರೀಡೆ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಇಂದು ಸರ್ಕಾರದಲ್ಲಿ ನೇಮಕಾತಿ ಮಾಡುವ ಪೊಲೀಸ್, ಆರ್ಮಿ ,ಬಿಎಸ್ಎಫ್ ರೈಲ್ವೆ ಇಲಾಖೆ, ಇತ್ಯಾದಿ ಕೆಲಸಗಳಲ್ಲಿ ಕ್ರೀಡೆ ಬಹಳ ಮುಖ್ಯ. ಹಾಗಾಗಿ ವಿದ್ಯಾರ್ಥಿಗಳು ಓದುವುದರ ಜೊತೆಗೆ ಹಾಡುವುದನ್ನು ಕಲಿಯಬೇಕು ಎಂದು ತಿಳಿಸಿದರು.
ಮನುಷ್ಯ ಸಂಘ ಜೀವಿ. ಹುಟ್ಟಿನಿಂದ ಸಾಯುವವರಿಗೆ ಸಮಾಜದಲ್ಲಿ ಒಂದಲ್ಲ ಒಂದು ಸೇವಾ ಮನೋಭಾವವನ್ನು ಬೆಳೆಸಿಕೊಂಡಿರುತ್ತಾನೆ. ನನಗಲ್ಲ ನಿನಗೆ ಎಂಬುದು ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯ ವಾಕ್ಯವಾಗಿದೆ. ವಿದ್ಯಾರ್ಥಿಗಳು ಸರಳವಾದ ಜೀವನ ಮತ್ತು ಉತ್ತಮವಾದ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕಾದರೆ ಸೇವಾ ಮನೋಭಾವವನ್ನು ಕಲಿಯಬೇಕು. ರಾಷ್ಟ್ರೀಯ ಸೇವಾ ಯೋಜನೆಯಿಂದ ಸಮಾಜಕ್ಕೆ ವಿದ್ಯಾರ್ಥಿಗಳು ಏನನ್ನಾದರೂ ಕೊಡುಗೆಯನ್ನು ಕೊಡುವುದರ ಮೂಲಕ ಸತ್ಪ್ರಜೆಯಾಗಿ ರೂಪಿಸಿಕೊಳ್ಳಲು ಕಾರಣವಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಪಠ್ಯವನ್ನು ಅಭ್ಯಾಸ ಮಾಡುವುದರ ಜೊತೆಗೆ ಸತತವಾದ ಪರಿಶ್ರಮ, ತಾಳ್ಮೆ ,ಶ್ರದ್ಧೆ, ಮಾನವೀಯತೆ ,ಪ್ರೀತಿ, ಸತ್ಯ ಪ್ರಾಮಾಣಿಕತೆ, ಮುಂತಾದ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ಮಾನವೀಯ ಸಂಬಂಧಗಳು ಗಟ್ಟಿಯಾಗುವುದಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಬಹಳ ಮುಖ್ಯವಾಗುತ್ತವೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎಂ.ಎಸ್.ಮಾಳಿಗೆ ಮಾತನಾಡುತ್ತಾ ವಿದ್ಯಾರ್ಥಿಗಳು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿತುಕೊಳ್ಳಬೇಕು. ಇವು ಜೀವನದ ಅತ್ಯಂತ ಪ್ರಮುಖವಾದ ಮಾನವೀಯ ಮೌಲ್ಯಗಳಾಗಿರುತ್ತವೆ. ಇಂದಿನ ವಿದ್ಯಾರ್ಥಿಗಳು ಸೂಕ್ಷ್ಮವಾದ ಸಂವೇದನೆಯ ಚಿಂತನೆಯನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ಯುವ ಜನತೆ ಕೆಟ್ಟ ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇವುಗಳಿಂದ ಹೊರಬರಬೇಕಾದರೆ ಪಠ್ಯೇತರ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸುತ್ತಾ, ವಿದ್ಯಾರ್ಥಿಗಳು ಕೌಶಲ್ಯಗಳು ಮತ್ತು ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರೊ. ರುಕ್ಷಾನ ಷೇಕ್ ಪ್ರಾಸ್ತಾವಿಕ ಮಾತುಗಳನ್ನು ಆಡಿದ್ದರು. ಪ್ರೊ.ಡಿ.ಎಸ್.ಮಂಡೇದ ಸ್ವಾಗತಿಸಿದರು. ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷರಾದ ಪ್ರೊ.ಸುನೀತ ಡಿ. ವಂದಿಸಿದರು. ಪ್ರೊ.ನಾಗರಾಜು, ಪ್ರೊ.ಪೂಜಾರಿ, ಪ್ರೊ.ಕಮಲ, ಪ್ರೊ.ರೋಹಿಣಿ, ವಿದ್ಯಾರ್ಥಿ ಪ್ರತಿನಿಧಿ ರಾಜು ಪಾಟೀಲ್ ಮತ್ತು ಲಕ್ಷ್ಮಿ ಪೂಜಾರಿ, ಇತರೇ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರು ಪ್ರಾರ್ಥಿನೆ ಮತ್ತು ಸ್ವಾಗತ ಗೀತೆ ಹಾಡಿದರು. ಉದ್ಘಾಟನೆ ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ವರದಿ :ಡಾ. ವಿಲಾಸ ಕಾಂಬಳೆ
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments