ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆಯಬೇಕು: ಡಾ.ಎನ್.ಸಿ.ವೆಂಕಟರಾಜು
ಮೈಸೂರು: ಭಾರತ ದೇಶ ಹಳ್ಳಿಗಳ ರಾಷ್ಟ್ರ. ಗ್ರಾಮೀಣ ಪ್ರದೇಶದಲ್ಲಿ ಸರಿಸುಮಾರು 56% ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನಮಾನವನ್ನು ಪಡೆಯಬೇಕೆಂದು ಮೈಸೂರಿನ ಭೂಸ್ವಾಧೀನ ವಿಶೇಷ ಅಧಿಕಾರಿ ಮತ್ತು ಗಂಗೋತ್ರಿ ಗೆಳೆಯರ ಬಳಗದ ಗೌರವಾಧ್ಯಕ್ಷರಾದ ಡಾ.ಎನ್.ಸಿ.ವೆಂಕಟರಾಜು ಸಲಹೆ ನೀಡಿದರು.
ಮೈಸೂರಿನ ಗಂಗೋತ್ರಿ ಗೆಳೆಯರ ಬಳಗದ ಟ್ರಸ್ಟ್ ವತಿಯಿಂದ ನೆಲಮಾಕನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ನೋಟ್ ಬುಕ್ ಹಾಗೂ ಲೇಖನಿ ಸಾಮಗ್ರಿಗಳ ವಿತರಣೆ ಸಮಾರಂಭದ ಉದ್ಘಾಟನೆ ಮಾಡಿ ಮಾತನಾಡಿದರು.
ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಬುದ್ಧಿವಂತರಾಗಿದ್ದಾರೆ. ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ 625 ಕ್ಕೆ 625 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಹೀಗೆ ಪ್ರತಿಯೊಬ್ಬ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಚೆನ್ನಾಗಿ ಅಧ್ಯಯನ ಮಾಡಿ ಉನ್ನತ ಸ್ಥಾನವನ್ನು ಪಡೆದು ಹುಟ್ಟಿದ ಊರಿಗೆ ಕೀರ್ತಿಯನ್ನು ತರಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಗಂಗೋತ್ರಿ ಗೆಳೆಯರ ಬಳಗದ ಸದಸ್ಯರು ಹಾಗೂ ಚಿಕ್ಕೋಡಿ ತಾಲೂಕಿನ ಬೇಡಿಕಿಹಾಳದ ಶ್ರೀಮತಿ ಕುಸುಮಾವತಿ ಮಿರರ್ಜಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಡಾ.ಹೊಂಬಯ್ಯ ಮಾತನಾಡುತ್ತಾ, ಗಂಗೋತ್ರಿ ಗೆಳೆಯರ ಬಳಗದ ಟ್ರಸ್ಟ್ ಪ್ರತಿ ವರ್ಷವೂ ಒಂದಲ್ಲ ಒಂದು ವಿನೂತನವಾದಂತ ಸಾಮಾಜಿಕ ಪರವಾದ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಕಳೆದ ಬಾರಿ ಆರೋಗ್ಯ ತಪಾಸಣೆ ಶಿಬಿರ, ಹಾಗೂ ಮೈಸೂರಿನ ವಿವಿಧ ಸರ್ಕಾರಿ ಶಾಲೆಗಳಲ್ಲಿ ಪುಸ್ತಕ ವಿತರಣೆಗಳನ್ನು ಮಾಡಿದ್ದೇವೆ. ಇದರ ಮೂಲ ಉದ್ದೇಶ ಬಡ ವಿದ್ಯಾರ್ಥಿಗಳು ಚೆನ್ನಾಗಿ ಅಧ್ಯಯನ ಮಾಡಿ ಉನ್ನತ ವ್ಯಾಸಂಗವನ್ನು ಪಡೆದು ಉನ್ನತವಾದ ಅಧಿಕಾರಿಗಳಾಗಿ ಸಮಾಜ ಸೇವೆ ಮಾಡಬೇಕೆಂಬ ಕಳಕಳಿಯನ್ನು ಗಂಗೋತ್ರಿ ಗೆಳೆಯರ ಬಳಗದ ಟ್ರಸ್ಟ್ ಆಶಯವನ್ನು ಹೊಂದಿದೆ ಎಂದು ತಿಳಿಸಿದರು.
ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಗಂಗೋತ್ರಿ ಗೆಳೆಯರ ಬಳಗದ ಸದಸ್ಯರಾದ ಕೃಷ್ಣ, ನಂಜುಂಡ, ಮಹದೇವ, ದಾವಣಗೆರೆ ವಿಶ್ವವಿದ್ಯಾಲಯದ ಡಾ.ರಂಗಸ್ವಾಮಿ, ಡಾ.ಸೌಮ್ಯ, ಕುಮಾರ್, ಶಿವರಾಜ್, ಹರ್ಷವರ್ಧನ್ ಹಾಗೂ ನೂರಾರು ಬಡವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ವರದಿ :ಡಾ. ವಿಲಾಸ ಕಾಂಬಳೆ
ಕನ್ನಡ ಉಪನ್ಯಾಸಕರು
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments