* ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶ್ರೇಯಾ ಹುಣಸಿಮರದ ಉತ್ತಮ ಸಾಧನೆ*

 ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶ್ರೇಯಾ ಹುಣಸಿಮರದ ಉತ್ತಮ ಸಾಧನೆ



ಧಾರವಾಡ: ಜೂನ್, 06: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ನಗರದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಹುಣಸಿಮರದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುತ್ತಾರೆ.


 ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು 567 ಅಂಕಗಳು (ಶೇ.90.72) ರಷ್ಟು ಅಂಕ ಪಡೆದು ಶ್ರೇಯಾ ಹುಣಸಿಮರದ ಉತ್ತಮ ಸಾಧನೆ ಮಾಡಿರುತ್ತಾರೆ. ಶ್ರೇಯಾ ಹುಣಸಿಮರದ ಅವರಿಗೆ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯರು, ಎಲ್ಲ ಸಿಬ್ಬಂದಿ ವರ್ಗದವರು ಮತ್ತು ಅವರ ತಂದೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಜಯರಾಜ ಹುಣಸಿಮರದ ಹಾಗೂ ಕುಟುಂಬ ಸದಸ್ಯರು, ಸ್ನೇಹಿತರು ಶುಭ ಹಾರೈಸಿರುತ್ತಾರೆ.


ವರದಿ :ಡಾ. ವಿಲಾಸ ಕಾಂಬಳೆ 

ಹಾರೂಗೇರಿ

Image Description

Post a Comment

0 Comments