*ಎನ್ ಎಸ್ ಎಸ್ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ *

 ಎನ್ ಎಸ್ ಎಸ್ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ 



ಕಾಗವಾಡ : ಶಿವಾನಂದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ 2023-24 ನೇ  ಸಾಲಿನ 7 ದಿನಗಳ ವಾರ್ಷಿಕ ವಿಶೇಷ ಶಿಬಿರ ದತ್ತು  ಗ್ರಾಮ ಶೇಡಬಾಳದಲ್ಲಿ ಉದ್ಘಾಟನೆಗೊಂಡಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಪ್ರೊ.ಬಿ.ಎ ಪಾಟೀಲ ರಾಷ್ಟ್ರೀಯ  ಸೇವಾ ಯೋಜನೆಯ ವಿಶೇಷ ಶಿಬಿರಗಳು ಶಿಬಿರಾರ್ಥಿಗಳಲ್ಲಿ ಶಿಸ್ತು, ಸಂಯಮ ಮತ್ತು ಆಸಕ್ತಿಯನ್ನು ಬೆಳೆಸುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿಗಳಾದ ಮೇಜರ್ ವಿ.ಎಸ್ ತುಗಶೆಟ್ಟಿ ಶಿಬಿರಗಳಿಂದ ವಿದ್ಯಾರ್ಥಿಗಳು ಸಾಕಷ್ಟು ಕಲಿಯಲು ಸಹಾಯವಾಗುತ್ತದೆ. ಅವರಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುತ್ತದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್.ಎ.ಕರ್ಕಿ ಕಾಲೇಜಿನ ಇತಿಹಾಸದಲ್ಲಿ  ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಶ್ಲಾಘನೀಯವಾಗಿದೆ.ವಾರ್ಷಿಕ ಶಿಬಿರಗಳು ವ್ಯಕ್ತಿತ್ವ ವಿಕಸನದ ಭಾಗವಾಗಿವೆ. ಇಂತಹ ಶಿಬಿರಗಳಲ್ಲಿ ಭಾಗವಹಿಸುವುದು ಅತ್ಯಂತ ಮಹತ್ವದ್ದು ಇದನ್ನು ಸರಿಯಾಗಿ ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ವ್ಯಕ್ತಿತ್ವನ್ನು ನಿರ್ಮಾಣ ಮಾಡಿಕೊಳ್ಳಬೇಕು. ಎಂದು ಹೇಳಿ ಶಿಬಿರದ  ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಹಾರೈಯಿಸಿದರು. ಸಮಾರಂಭದಲ್ಲಿ ಶೇಡಬಾಳದ ಗಣ್ಯವ್ಯಕ್ತಿಗಳಾದ ಶ್ರೀ ಸುನೀಲ ಪಾಟೀಲ ಅವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು. ಶಿಬಿರಾರ್ಥಿಗಳಾದ ಕಾವ್ಯ ಅಸೋದೆ ಮತ್ತು ತಂಡ ಎನ್ ಎಸ್ ಎಸ್ ಗೀತೆಯನ್ನು ಪ್ರಸ್ತುಪಡಿಸಿದರು. ಪ್ರೊ.ಕುಮಾರ ಮಾಲಗಾಂವೆ ಸ್ವಾಗತಿಸಿದರು. ಕಾರ್ಯಕ್ರಮಾಧಿಕಾರಿಗಳಾದ ಡಾ.ಎ.ಎಂ.ಜಕ್ಕಣ್ಣವರ ವಂದಿಸಿದರು. ಪ್ರೊ.ಸೋನಾಲಿ ಪಡತಾರೆ ಮತ್ತು ಪ್ರೊ. ವಾಣಿಶ್ರೀ ಪಾಟೀಲ ನಿರೂಪಿಸಿದರು. ರಾ.ಸೇ.ಯೋ.2ನೇ ಘಟಕದ ಅಧಿಕಾರಿಗಳಾದ ಪ್ರೊ ಶಾಂತಿನಾಥ ಘೋರಪಡೆ ಸೇರಿದಂತೆ  ಕಾಲೇಜಿನ ಸಿಬ್ಬಂದಿ ಹಾಗೂ ಶೇಡಬಾಳದ ಗಣ್ಯ ಮಾನ್ಯರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. 


ವರದಿ : ಡಾ. ವಿಲಾಸ ಕಾಂಬಳೆ 

ಕನ್ನಡ ಉಪನ್ಯಾಸಕರು 

ಹಾರೂಗೇರಿ

Image Description

Post a Comment

0 Comments