*ಸಿ.ಎಲ್.ಇ ಪದವಿಪೂರ್ವ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ*
ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಹಾಗೂ ಸಿ.ಎಲ್.ಇ ಸಂಸ್ಥೆಯ ಪದವಿಪೂರ್ವ ಕಾಲೇಜು ಚಿಕ್ಕೋಡಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಹಿಂದಿ ದಿವಸ್ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ 'ಅನೇಕತಾ ಮೇ ಏಕತಾ ಭಾರತ ವಿಶೇಷತಾ' ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಸುಮಾರು 30 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ ಕು. ತೇಜಂ ಸೂರ್ಯವಂಶಿ ಪ್ರಥಮ ಸ್ಥಾನ, ಕು. ವಿಮಲಾ ಪಟೇಲ ದ್ವಿತೀಯ ಸ್ಥಾನ, ಕು. ಭೂಮಿಕಾ ಅಕ್ಕೋಳೆ ತೃತೀಯ ಸ್ಥಾನ ಪಡೆದುಕೊಂಡರು. ಪ್ರಾಚಾರ್ಯ ಎಸ್.ಬಿ. ಪಾಟೀಲ, ಉಪಪ್ರಾಚಾರ್ಯ ಡಿ.ಎಸ್. ಕೊಟಬಾಗಿ, ಹಿಂದಿ ವಿಷಯದ ಸಂಯೋಜಕ ಡಾ. ಎಮ್.ಎಸ್. ಇಚಲಕರಂಜಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ : ಡಾ. ವಿಲಾಸ ಕಾಂಬಳೆ
ಕನ್ನಡ ಉಪನ್ಯಾಸಕರು
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments