ಡಿಜಿಟಲ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಅಪಾರ ಜ್ಞಾನ ಸಂಪಾದನೆಯಾಗುತ್ತದೆ : ಡಾ.ಹೊಂಬಯ್ಯ
ಚಿಕ್ಕೋಡಿ: ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣದಲ್ಲಿ ಕ್ರಾಂತಿ ಉಂಟಾಗಬೇಕಾದರೆ ಡಿಜಿಟಲ್ ಶಿಕ್ಷಣವನ್ನು ಪ್ರತಿಯೊಂದು ಶಾಲೆಗಳು ಅಳವಡಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಜ್ಞಾನ ಸಂಪಾದನೆಯಾಗಲು ಸಾಧ್ಯವಾಗುತ್ತದೆ ಎಂದು ಶ್ರೀಮತಿ ಕುಸುಮಾವತಿ ಮಿರಜಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರು ಮತ್ತು ಸಾಹಿತಿಗಳಾದ ಡಾ.ಹೊಂಬಯ್ಯ ಹೊನ್ನಲಗೆರೆ ಅಭಿಪ್ರಾಯಪಟ್ಟರು.
ಇವರು ಚೌಸನ್ ಶಿಕ್ಷಣ ಮಹಾವಿದ್ಯಾಲಯವು ಶನಿವಾರ ಆಯೋಜಿಸಿದ ಒಂದು ದಿನದ ಕಾರ್ಯಾಗಾರದಲ್ಲಿ ' ಡಿಜಿಟಲ್ ಶಿಕ್ಷಣದಲ್ಲಿ ಎನ್.ಸಿ.ಇ.ಆರ್.ಟಿಯ ಪಾತ್ರ' ಎಂಬ ವಿಷಯದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ಅಡಿಯಲ್ಲಿ ಬರುವ ಎನ್ ಸಿ ಇಆರ್ ಟಿ ಸಂಸ್ಥೆಯು ಶಾಲಾ ಶಿಕ್ಷಣದಲ್ಲಿ ಗುಣಾತ್ಮಕ ಸುಧಾರಣೆ ಹಾಗೂ ಶೈಕ್ಷಣಿಕ ಪರಿಸರದಲ್ಲಿ ಕಲಿಕೆಯ ಪ್ರಕ್ರಿಯೆಯನ್ನು ಸುಲಭಗೊಳಿಸುವಲ್ಲಿ ಡಿಜಿಟಲ್ ಸಾಧನಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣವು ಕಲಿಕೆಯಲ್ಲಿ ಪೂರಕ ವಾತಾವರಣವನ್ನು ನಿರ್ಮಾಣ ಮಾಡುತ್ತದೆ. ಡಿಜಿಟಲ್ ತಂತ್ರಜ್ಞಾನಗಳನ್ನು ಬಳಸಿಕೊಂಡು ಪರಿಣಾಮಕಾರಿ ಆದಂತ ಬೋಧನೆಯನ್ನು ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಆನ್ಲೈನ್ ಕೋರ್ಸ್ಗಳು, ಡಿಜಿಟಲ್ ಪಠ್ಯಪುಸ್ತಕಗಳು, ವರ್ಚುವಲ್ ತರಗತಿಗಳು, ವಿಡಿಯೋ ಕಾನ್ಫರೆನ್ಸ್, ಗಳು ಆನ್ಲೈನ್ ಲೈಬ್ರರಿಗಳು, ಡಿಜಿಟಲ್ ಶಿಕ್ಷಣವನ್ನು ನೀಡಲು ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ಉದಾಹರಣೆ ಸಹಿತ ಶಿಕ್ಷಣ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿದರು.
ಈ ಹಿನ್ನಲೆಯಲ್ಲಿ ಜ್ಞಾನ,ಕೌಶಲ್ಯ, ಬೋಧನೆ,ತರಬೇತಿ ,ಎಂಬ ನಾಲ್ಕು ಆಯಾಮಗಳನ್ನು ಸಂಶೋಧನೆಯ ಮೂಲಕ ಭಿನ್ನ-ಭಿನ್ನವಾದಂತ ವಿಷಯಗಳನ್ನು ತಿಳಿದುಕೊಳ್ಳಲು ಎನ್ ಸಿ ಇ ಆರ್ ಟಿ ಶಿಕ್ಷಕರಿಗೆ ತರಬೇತಿಯನ್ನು ನೀಡುತ್ತಾ ಬಂದಿದೆ ಎಂದು ತಿಳಿಸಿದರು.
ಈ ಕಾರ್ಯಗಾರದಲ್ಲಿ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷರಾದ ಶಕುಂತಲಾ ಟಿ ಚೌಗುಲೆ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬೆಳಗಾವಿಯ ಜೈನ್ ಮಹಿಳಾ ಮಂಡಲ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎ.ಎಚ್. ಜೋಶಿ ಭಾಗವಹಿಸಿದ್ದರು. ಪ್ರಾಂಶುಪಾಲರಾದ ಕನಕಗಿರಿ ಅವರು ಅಧ್ಯಕ್ಷತೆ ವಹಿಸಿದ್ದರು. ಮಹಾವಿದ್ಯಾಲಯದ ಅಧ್ಯಕ್ಷರಾದ ಸುರೇಂದ್ರನಾಥ ಟಿ ಚೌಗುಲೆ, ನಿರ್ದೇಶಕರಾದ ಶ್ರೀಮತಿ ಸವಿತಾ ಎಸ್ ಚೌಗುಲೆ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕೇತರರು,ಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments