* ರಾಜ್ಯಮಟ್ಟದ ಶಿಕ್ಷಣ ರತ್ನ ಪ್ರಶಸ್ತಿಗೆ ಪ್ರೌಢಶಾಲೆ ಶಿಕ್ಷಕರಾದ ನಿಜಗುಣಯ್ಯ ಹೆಚ್ ಎಸ್ ಆಯ್ಕೆ*

 *ರಾಜ್ಯಮಟ್ಟದ ಶಿಕ್ಷಣ ರತ್ನ ಪ್ರಶಸ್ತಿಗೆ ಪ್ರೌಢಶಾಲೆ ಶಿಕ್ಷಕರಾದ ನಿಜಗುಣಯ್ಯ ಹೆಚ್ ಎಸ್ ಆಯ್ಕೆ*


 *ತಿಪಟೂರು*: ತುಮಕೂರು ಶೈಕ್ಷಣಿಕ ಜಿಲ್ಲೆಯ ತಿಪಟೂರು ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಡಾ ಬಿ ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಕಂಪಾರಹಳ್ಳಿ ಸಮಾಜ ವಿಜ್ಞಾನ ಶಿಕ್ಷಕರಾದ ನಿಜಗುಣಯ್ಯ ಹೆಚ್ ಎಸ್ ರವರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಬೆಂಗಳೂರಿನಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ರಾಜ್ಯ ಮಟ್ಟದ  ಶಿಕ್ಷಣ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಇವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಾಮಾಣಿಕ ಸೇವೆ ಮಕ್ಕಳ ಸರ್ವತೋಮುಖ ಬೆಳವಣಿಗೆ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಪನ್ಮೂಲ ವ್ಯಕ್ತಿ ಹಾಗೂ ವಿಶಿಷ್ಟ ಶಿಕ್ಷಕರಾಗಿ ಸಾಧಕರಾಗಿರುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿರುವ ಇವರನ್ನು ಗುರುತಿಸಿ 2024/ 25 ನೇ ಸಾಲಿನ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ಶಿಕ್ಷಣ ರತ್ನ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ

ಇಂಡೋ ಗ್ಲೋಬ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಅಕ್ಟೋಬರ್ 15 ರಂದು ನಡೆಯಲಿರುವ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸೂರ್ಯ ಫೌಂಡೇಶನ್ ಹಾಗೂ ಸ್ಮಾರಕ ಅಕಾಡೆಮಿ ಸಂಸ್ಥಾಪಕರಾದ ಸೋಮೇಶ್ ಅವರು ತಿಳಿಸಿದ್ದಾರೆ.


ವರದಿ : ಡಾ. ವಿಲಾಸ ಕಾಂಬಳೆ 

ಕನ್ನಡ ಉಪನ್ಯಾಸಕರು 

ಬೆಳಗಾವಿ

Image Description

Post a Comment

0 Comments