* ಡಾ. ಶಿವಕುಮಾರ. ಲಾ. ಸೂರ್ಯವಂಶ ಅವರಿಗೆ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ *
ಕಲಬುರಗಿಯ ಸಾಹಿತಿ ಡಾ. ಶಿವಕುಮಾರ. ಲಾ. ಸೂರ್ಯವಂಶ, ಅವರು ನಾಡಿನ ನೆಲ, ಜಲ, ಭಾಷೆ, ನುಡಿ, ಸಂಸ್ಕೃತಿ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದು, ಇವರು ಸಾಹಿತ್ಯ ಮತ್ತು ಸಮಾಜ ಕ್ಷೇತ್ರಗಳಲ್ಲಿ ನೀಡುತ್ತಿರುವ ಕೊಡುಗೆಯನ್ನು ಮತ್ತು ೧೯ ವರ್ಷಗಳಿಂದ ನಿರಂತರವಾಗಿ ಸಲ್ಲಿಸುತ್ತಿರುವ ಇವರ ಅನುಪಮ ಸೇವೆಯನ್ನು ಪರಿಗಣಿಸಿ, ರಾಜ್ಯಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ಇದೇ ನವೆಂಬರ್ ೧೭ ರಂದು ಜರುಗುವ ಕರ್ನಾಟಕ ರಾಜ್ಯೋತ್ಸವ ಮತ್ತು ಸುವರ್ಣ ಮಹೋತ್ಸವ ಕಾರ್ಯಕ್ರಮದ ಸಮಾರಂಭದಲ್ಲಿ ಕಲಬುರಗಿ ಸಾಹಿತಿ ಡಾ. ಶಿವಕುಮಾರ. ಲಾ. ಸೂರ್ಯವಂಶ, ಅವರಿಗೆ ಕರ್ನಾಟ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು, ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ, ಎಲ್. ಎಚ್. ಪೆಂಡಾರಿ, ಅವರು ತಿಳಿಸಿದ್ದಾರೆ.
ವರದಿ : ಡಾ. ವಿಲಾಸ್ ಕಾಂಬಳೆ
ಕನ್ನಡ ಉಪನ್ಯಾಸಕರು
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments