*ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ನೆನೆಯುತ್ತಾ...* ______________________ *ನೆಲ್ಸನ್ ಮಂಡೆಲಾ
ಅವರು ಭಾರತದ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಬಗ್ಗೆ ಹೀಗೆ ಹೇಳುತ್ತಾರೆ. `ಭಾರತದ ಸಂವಿಧಾನವು ದಕ್ಷಿಣ ಆಫ್ರಿಕಾದ ಸಂವಿಧಾನ ರಚಿಸಲು ಆಧಾರ ಸ್ಥಂಬವೂ ಪ್ರೇರಣೆಯೂ ಆಗಿದೆ. ನಮಗೆ ನಂಬಿಕೆ ಇದೆ, ನಮ್ಮ ಹೊಸ ಸಂವಿಧಾನ ರಚನೆಯಲ್ಲಿನ ನಮ್ಮ ಶ್ರಮವು ಭಾರತದ ಹೆಮ್ಮೆಯ ಪುತ್ರನಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಅಪಾರ ಶ್ರಮ ಮತ್ತು ಬೌದ್ಧಿಕತೆಯ ಪ್ರತಿಬಿಂಬವಾಗಿದೆ. ಅಂಬೇಡ್ಕರ್ ಅವರ ಕೊಡುಗೆ ಎಂಥದ್ದೆಂದರೆ, ಜಗತ್ತಿನ ತುಳಿತಕ್ಕೊಳಗಾದ ಎಲ್ಲರೂ ಸಾಮಾಜಿಕ ನ್ಯಾಯ ಮತ್ತು ಆತ್ಮಗೌರವ ಎತ್ತಿಹಿಡಿಯಲು ಸ್ಪೂರ್ತಿಯಾಗಿದ್ದಾರೆ’ ಎನ್ನುತ್ತಾರೆ. ಮಂಡೆಲಾ ಅವರು ಭಾರತದ ಸಂವಿಧಾನವನ್ನು ನೆನೆಯುತ್ತಾ ಅಷ್ಟೇ ಗೌರವದಿಂದ ಅಂಬೇಡ್ಕರ್ ಅವರನ್ನೂ ನೆನೆಯುತ್ತಾರೆ. ಇದು ಅಂಬೇಡ್ಕರ್ ಅವರ ಜಾಗತಿಕ ಮನ್ನಣೆಯ ಒಂದು ಸಾಂಕೇತಿಕತೆಯಾಗಿದೆ.*
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments