* ರಾಜ್ಯ ಮಟ್ಟದ ಯುವ ಪ್ರಶಸ್ತಿಗೆ ನಾಗೊಂಡಹಳ್ಳಿ ಸುನಿಲ್ ಆಯ್ಕೆ*

 ರಾಜ್ಯ ಮಟ್ಟದ ಯುವ ಪ್ರಶಸ್ತಿಗೆ ನಾಗೊಂಡಹಳ್ಳಿ ಸುನಿಲ್ ಆಯ್ಕೆ



ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಕೊಡಮಾಡುವ 2024-25ನೇ ಸಾಲಿನ ರಾಜ್ಯ ಯುವ ಪ್ರಶಸ್ತಿಗೆ ನಾಗೊಂಡಹಳ್ಳಿ ಸುನಿಲ್ ಆಯ್ಕೆಯಾಗಿದ್ದಾರೆ. ಜನವರಿ 18ರಂದು ದಕ್ಷಿಣ ಕನ್ನಡ ಜಿಲ್ಲೆಯ ಸವಣೂರಿನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜರುಗಲಿದ್ದು ನಾಗೊಂಡಹಳ್ಳಿ ಸುನಿಲ್ ಪ್ರಸ್ತುತ ಶಿರಾ ನಗರದ ಪ್ರತಿಷ್ಠಿತ ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಾ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡು ಈಗಾಗಲೇ ಕೃತಿಗಳನ್ನು ಪ್ರಕಟಗೊಳಿಸಿದ್ದಾರೆ. ನಾಗೊಂಡಹಳ್ಳಿ ಸುನಿಲ್ ಅವರನ್ನು ಪ್ರೆಸಿಡೆನ್ಸಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಚಿದಾನಂದ್ ಎಂ ಗೌಡ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಸುಬ್ರಹ್ಮಣ್ಯ ಡಿ.ಕೆ ರವರು ಹಾಗೂ ಮಾಲೂರಿನ ಸಾಹಿತ್ಯ ಸಂಘಗಳು ಅಭಿನಂದಿಸಿದ್ದಾರೆ.


ವರದಿ : ಡಾ. ವಿಲಾಸ್ ಕಾಂಬಳೆ 

ಕನ್ನಡ ಉಪನ್ಯಾಸಕರು 

ಬೆಳಗಾವಿ.

Image Description

Post a Comment

0 Comments