ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಶ್ರೀ ಜ್ಞಾನೋದಯ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜಿ ಬಿ ಪಾಟೀಲ ಪ್ರೌಢಶಾಲೆ ಹಾರೂಗೇರಿ ಕ್ರಾಸ್ ಸನ್ 2024 25ನೇ ಸಾಲಿನ ಶಾಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಮತ್ತು ರಂಗೋಲಿ ಸ್ಪರ್ಧೆ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭ ಜರುಗಿತ್ತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಹಿಡಕಲ್ಲದ ವಸಂತ ರಾವ ಪಾಟೀಲ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಚಾರ್ಯ ಸಾಹಿತಿ ಟಿ ಎಸ್ ವಂಟಗೂಡಿ ಮಾತನಾಡಿ ಆಧುನಿಕ ಯುಗದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಬಹಳಷ್ಟು ಮುಂದುವರೆದಿದೆ . ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಹೊರತೆಗೆಯಲು ವಿಜ್ಞಾನ ವಸ್ತು ಪ್ರದರ್ಶನ ರಂಗೋಲಿ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುತ್ತಿರುವ ಬಸವೇಶ್ವರ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸೇವೆ ಶ್ಲಾಘನೀಯವಾದದು, ವಿದ್ಯಾರ್ಥಿಗಳು ಯಾವಾಗಲೂ ಕ್ರಿಯಾಶೀಲರಾಗಿ ಕಾರ್ಯವನ್ನು ಮಾಡಬೇಕು. ಜ್ಞಾನೋದಯ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುವ ಎಲ್ಲ ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜ್ಞಾನ ಬೆಳಗುವ ಜ್ಞಾನದ ರತ್ನಗಳಾಗಬೇಕೆಂದು, ಸಾಹಿತಿ ಟಿ ಎಸ್ ವಂಟಗೂಡಿ ಅಭಿಮತ ವ್ಯಕ್ತಪಡಿಸಿದರು
.
ಕಾರ್ಯಕ್ರಮವನ್ನು ವಿಶ್ರಾಂತ ಪ್ರಾಚಾರ್ಯ ಡಾ ಸಿ ಆರ್ ಗುಡಿಸಿ ಉದ್ಘಾಟಿಸಿದರು.ವೇದಿಕೆ ಮೇಲೆ ಸಂಸ್ಥಾಪಕ ಅಧ್ಯಕ್ಷರಾದ ಗೌಡಪ್ಪಗೌಡ ಪಾಟೀಲ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.
ಸಮಾರಂಭದಲ್ಲಿ ಛೇರ್ಮನ್ ರಾದ ಪ್ರಕಾಶ್ ಗೌಡ ಪಾಟೀಲ, ನಿವೃತ್ತ ಪ್ರಾಚಾರ್ಯ ಬಿ ಎಂ ಚಿಂಚಲಿಕರ ಸಿ ಆರ್ ಪಿ ಮಹಾಂತೇಶ ಮುಗಳಕೋಡ, ಮುಖ್ಯೋಪಾಧ್ಯಾಯ ಸುನಿಲ್ ಕಾಂಬಳೆ, ಈ ಎಸ್ ಪಾಟೀಲ ಸೇರಿದಂತೆ ಎಲ್ಲಾ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳ ವೃಂದ ಹಾಜರಿದ್ದರು.
ವರದಿ : ಡಾ. ವಿಲಾಸ ಕಾಂಬಳೆ
ಕನ್ನಡ ಉಪನ್ಯಾಸಕರು
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments