ಸಂಸ್ಕೃತ ವಿಭಾಗದ ಸಂಶೋಧನಾರ್ಥಿ ಗೋವಿಂದರಾಜು ರವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಬೆಂಗಳೂರು: ಮಾ.12: ಮಾಗಡಿ ತಾಲೂಕಿನ ಕುದೂರು ಹೋಬಳಿಯ ಕಣನೂರು ಪಾಳ್ಯ ಗ್ರಾಮದ ನಿವಾಸಿ ಶ್ರೀ ಕೇಶವಮೂರ್ತಿ ಮತ್ತು ಶ್ರೀಮತಿ ಲಕ್ಷ್ಮಮ್ಮ ದಂಪತಿಯ ಪುತ್ರ, ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಸಂಸ್ಕೃತ ವಿಭಾಗದ ಸಂಶೋಧನಾ ವಿದ್ಯಾರ್ಥಿ ಗೋವಿಂದರಾಜು ಕೆ. ರವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ಸಂಸ್ಕೃತ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಪ್ರೊ. ಸಿ. ಶಿವರಾಜು ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ಕೌಟಿಲ್ಯನ ಅರ್ಥಶಾಸ್ತ್ರದಲ್ಲಿ ರಾಜ್ಯ ಧರ್ಮದ ಒಂದು ವಿಮಾರ್ಶಾತ್ಮಕ ಅಧ್ಯಯನ" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ಸಂದರ್ಭದಲ್ಲಿ ಇವರ ಶೈಕ್ಷಣಿಕ ಸಾಧನೆಗಾಗಿ ಗೋವಿಂದರಾಜು ಕೆ. ರವರಿಗೆ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಮತ್ತು ಕಣನೂರು ಪಾಳ್ಯ ಗ್ರಾಮ, ಸುತ್ತಮುತ್ತಲಿನ ಗ್ರಾಮಸ್ಥರು ಸೇರಿ ಶುಭ ಕೋರಿ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ : ಡಾ. ವಿಲಾಸ್ ಕಾಂಬಳೆ
ಕನ್ನಡ ಉಪನ್ಯಾಸಕರು
Haruger🎂

.gif)

.gif)


0 Comments