ನವೀನ್ ಕುಮಾರ್ ಬಿ.ಎನ್. ರವರಿಗೆ ಪಿಎಚ್.ಡಿ ಪದವಿ ಪ್ರದಾನ

 ನವೀನ್ ಕುಮಾರ್ ಬಿ.ಎನ್. ರವರಿಗೆ ಪಿಎಚ್.ಡಿ ಪದವಿ ಪ್ರದಾನ



ಗಣಿತ ಶಾಸ್ತ್ರ ವಿಭಾಗದ ಸಂಶೋಧನಾರ್ಥಿ ನವೀನ್ ಕುಮಾರ್ ಬಿ.ಎನ್. ರವರಿಗೆ ಡಾಕ್ಟರೇಟ್ ಪದವಿ ಪ್ರದಾನ


ಬಾಗೇಪಲ್ಲಿ: ಮಾ.12: (ಭಾಗ್ಯನಗರ) ತಾಲೂಕಿನ ಬೋಡಿಕದಿರೇಪಲ್ಲಿ ಗ್ರಾಮದ ಶ್ರೀಮತಿ ನರಸಮ್ಮ ಮತ್ತು ಶ್ರೀ ನರಸಿಂಹಪ್ಪ ಬಿ. ದಂಪತಿಯ ಕಿರಿಯ ಪುತ್ರ, ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಗಣಿತ ಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ನವೀನ್ ಕುಮಾರ್ ಬಿ.ಎನ್. ರವರಿಗೆ ಪಿಎಚ್.ಡಿ ಪದವಿ ಲಭಿಸಿದೆ.


ಗಣಿತ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಹರಿಣ ಪಿ. ವಾಘಮೋರೆ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ 

“ಎ ಸ್ಟಡಿ ಆನ್ ಕಾಂಟ್ರಿಬ್ಯೂಷನ್ಸ್ ಟು ನೆವನ್ಲಿನ್ನಾ ಥಿಯರಿ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.


ಪ್ರಸ್ತುತ ನವೀನ್ ಕುಮಾರ್ ಬಿ.ಎನ್. ಅವರು

ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ರಾಮನಗರ ಸ್ನಾತಕೋತ್ತರ ಕೇಂದ್ರದ ಗಣಿತ ಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಇದೇ ಸಂದರ್ಭದಲ್ಲಿ ಇವರ ಶೈಕ್ಷಣಿಕ ಸಾಧನೆಗಾಗಿ ನವೀನ್ ಕುಮಾರ್ ಬಿ. ಎನ್. ರವರಿಗೆ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಮತ್ತು ಬೋಡಿಕದಿರೇಪಲ್ಲಿ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಸೇರಿ ಶುಭ ಕೋರಿ ಅಭಿನಂದನೆ ಸಲ್ಲಿಸಿದ್ದಾರೆ.


ವರದಿ : ಡಾ. ವಿಲಾಸ್ ಕಾಂಬಳೆ 

ಕನ್ನಡ 

ಉಪನ್ಯಾಸಕರು 

ಹಾರೂಗೇರಿ

Image Description

Post a Comment

0 Comments