ಮೋಹನ್ ಕುಮಾರ್ ಆರ್. ರವರಿಗೆ ಪಿಎಚ್.ಡಿ. ಪದವಿ ಪ್ರದಾನ

 ಮೋಹನ್ ಕುಮಾರ್ ಆರ್. ರವರಿಗೆ ಪಿಎಚ್.ಡಿ. ಪದವಿ ಪ್ರದಾನ



ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮೋಹನ್ ಕುಮಾರ್ ಆರ್. ರವರಿಗೆ ಡಾಕ್ಟರೇಟ್ ಪದವಿ ಪ್ರದಾನ


ಬೆಂಗಳೂರು ನಗರ: ಏ.23: ಆನೇಕಲ್ ತಾಲೂಕಿನ ನಿವಾಸಿ ಶ್ರೀ ರಾಜಪ್ಪ ಪಿ. (ನೇಕಾರ) ಮತ್ತು ಶ್ರೀಮತಿ ಸಾವಿತ್ರಮ್ಮ ದಂಪತಿಯ ಪುತ್ರ, ಹಾಲಿ ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮೋಹನ್ ಕುಮಾರ್ ಆರ್. ರವರಿಗೆ ಪಿಎಚ್.ಡಿ ಪದವಿ ಲಭಿಸಿದೆ.


ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರು ಮತ್ತು ರಾಮನಗರ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ. ಬಿ. ಗಂಗಾಧರ ರವರ ಮಾರ್ಗದರ್ಶನದಲ್ಲಿ ಮಂಡಿಸಿದ  "ತೊಗಟವೀರ ಕ್ಷತ್ರಿಯ ಸಮುದಾಯ: ಒಂದು ಸಾಂಸ್ಕೃತಿಕ ಅಧ್ಯಯನ (ಬೆಂಗಳೂರು ನಗರ ಜಿಲ್ಲೆಯನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.


ಇದೇ ಸಂದರ್ಭದಲ್ಲಿ ಮೋಹನ್ ಕುಮಾರ್ ಆರ್. ರವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಮತ್ತು ಆನೇಕಲ್ ತಾಲೂಕಿನ ಸುತ್ತಮುತ್ತಲಿನವರು ಶುಭಕೋರಿ, ಅಭಿನಂದನೆ ಸಲ್ಲಿಸಿದ್ದಾರೆ.


ವರದಿ : ಡಾ. ವಿಲಾಸ್ ಕಾಂಬಳೆ 

ದೇಹ ದಾನಿಗಳ ಗ್ರಾಮ 

ಶೇಗುಣಶಿ 

ಮೋ: 9591782353

Image Description

Post a Comment

0 Comments