ಒಳ ಮೀಸಲಾತಿಯಲ್ಲಿ ಸಮಾನ ಉಪಜಾತಿಗಳ ಗುಂಪುಗಳನ್ನು ಒಟ್ಟುಗೂಡಿಸಿಲ್ಲ ಘೋರ ಅನ್ಯಾಯ: ಛಲವಾದಿ ಗುರುಪೀಠ ಸಂಸ್ಥಾನದ ಬಸವನಾಗಿ ದೇವ ಸ್ವಾಮೀಜಿ ಆಕ್ರೋಶ

 ಒಳ ಮೀಸಲಾತಿಯಲ್ಲಿ ಸಮಾನ ಉಪಜಾತಿಗಳ ಗುಂಪುಗಳನ್ನು ಒಟ್ಟುಗೂಡಿಸಿಲ್ಲ ಘೋರ ಅನ್ಯಾಯ: ಛಲವಾದಿ ಗುರುಪೀಠ ಸಂಸ್ಥಾನದ ಬಸವನಾಗಿ ದೇವ ಸ್ವಾಮೀಜಿ ಆಕ್ರೋಶ



ಒಳ ಮೀಸಲಾತಿ ಹಂಚಿಕೆಯಲ್ಲಿ ತಾಂತ್ರಿಕ ಸಮಸ್ಯೆ ಬಂದರೆ ಹಳೆ ಮೀಸಲಾತಿಯ ಅನ್ವಯವಾಗಲಿ: ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ್ ಸ್ವಾಮೀಜಿ


ಅವೈಜ್ಞಾನಿಕ ದತ್ತಾಂಶದ ಒಳಮೀಸಲಾತಿ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧ: ಜ್ಞಾನ ಪ್ರಕಾಶ್ ಸ್ವಾಮೀಜಿ 



ಬೆಂಗಳೂರು: ಏ.24: ಅವೈಜ್ಞಾನಿಕ ಮತ್ತು ಅಪೂರ್ಣವಾದ ದತ್ತಾಂಶವನ್ನು ಆಧರಿಸಿ ಒಳಮೀಸಲಾತಿಯನ್ನು ಕಲ್ಪಿಸುವುದು ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ್ ಸ್ವಾಮೀಜಿ ಹೇಳಿದರು.


ಇಂದು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿರುವ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು. 2025 ರ ಆಗಸ್ಟ್ 18 ರಂದು ನಡೆದ ವಿಶೇಷ ಸಚಿವ ಸಂಪುಟದ ನಿರ್ಣಯವನ್ನು ಮರುಪರಿಶೀಲಿಸಿ ನಿರ್ಣಯವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.


ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ವರದಿ ಸಲ್ಲಿಸಲು ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿತ್ತು. ಪ್ರಮುಖವಾಗಿ ಎಂಪಿರಿಕಲ್ ಡೇಟಾ ಕಲೆ ಹಾಕಲು ಸಮೀಕ್ಷೆಯನ್ನು ಕೈಗೆತ್ತಿಕೊಂಡ ಆಯೋಗವು ಬೆಂಗಳೂರು ಮಹಾನಗರ ಮತ್ತು ಇನ್ನಿತರ ಭಾಗಗಳಲ್ಲಿ ಸೇರಿದಂತೆ ಪ್ರತಿಯೊಂದು ಜಿಲ್ಲೆಯಲ್ಲೂ ಕೂಡ ಸಮೀಕ್ಷೆಯನ್ನು ಪೂರ್ಣಗೊಳಿಸಿಲ್ಲ. ಇನ್ನೂ ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳ ಪ್ರಕಾರ ಬೆಂಗಳೂರು ಮಹಾನಗರದಲ್ಲಿ ಕೇವಲ 48% ಹಾಗೂ ಜಿಲ್ಲೆಗಳಲ್ಲಿ 52% ಮಾತ್ರ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಆಯೋಗ ಇದೇ ಅಪೂರ್ಣವಾದ ದತ್ತಾಂಶದ ಆಧಾರದ ಮೇಲೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದು ಸರಿಯಲ್ಲ ಎಂದು ತಿಳಿಸಿದರು.


ಕರ್ನಾಟಕ ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶದ 2011ರ ಜನಗಣತಿಯನ್ನು ಪರಿಗಣಿಸಿ, ವೈಜ್ಞಾನಿಕವಾಗಿ ತರ್ಕ ಬದ್ಧ ಒಳ ಮೀಸಲಾತಿ ಮತ್ತು ಪರಿಶಿಷ್ಟ ಜಾತಿಗಳಲ್ಲಿ ಸಮಾನ ಜಾತಿಯ ಉಪ-ಜಾತಿಗಳ ಗುಂಪುಗಳನ್ನು ಒಟ್ಟುಗೂಡಿಸುವ ಬಗ್ಗೆ ಪರಿಶೀಲಿಸಬೇಕು ಎಂದು ಛಲವಾದಿ ಗುರುಪೀಠ ಸಂಸ್ಥಾನದ ಬಸವನಾಗಿ ದೇವ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು. 


ಪರಿಶಿಷ್ಟ ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಕಲ್ಪಿಸುವುದು ನ್ಯಾಯಾಂಗದ ಉಲ್ಲಂಘನೆಯಾಗುತ್ತದೆ. ಹಾಗಾಗಿ ಮಾನ್ಯತೆ ಹೊಂದಿರುವ ದತ್ತಾಂಶ ಇಲ್ಲದ ಹೊರೆತು, ಯಾವ ಸೂತ್ರವನ್ನು ಬಳಸಿದರೂ ಪರಿಶಿಷ್ಟ ಜಾತಿಯ ಹಿಂದಿನ 15% ಮೀಸಲಾತಿಯಲ್ಲಿ ಒಳಮೀಸಲಾತಿ ಅಸಾಧ್ಯ ಎಂದು ಸ್ಪಷ್ಟಪಡಿಸಿದರು. 


ಇದೇ ವೇಳೆಯಲ್ಲಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಶ್ರೀ ಬಸವನಾಗಿ ದೇವ ಸ್ವಾಮೀಜಿ, ಸಿದ್ದರಾಮ ಶಿವಯೋಗಿ ಸ್ವಾಮೀಜಿ, ಸಂಚಾಲಕ ಶಿವಣ್ಣ ಬಿ. ಕನಕಪುರ, ದಲಿತ ಸಂಘರ್ಷ ಸಮಿತಿ ರಾಜ್ಯ ಮುಖಂಡರಾದ ಶ್ರೀ ಸಿದ್ದಲಿಂಗಯ್ಯ, ಶ್ರೀ ಸಿದ್ದಪ್ಪ, ಡಾ. ದೀಪಕ್ ಅಪ್ಪಾಜಿ, ಅಪ್ಪಗೆರೆ ಪ್ರದೀಪ್, ಗೌರಿ ಶಂಕರ್, ಶಿವರಾಜ್, ಡಾ. ಈಶ್ವರ್ ಸಿರಿಗೇರಿ, ಬಸವರಾಜ ಸಿದ್ರಾಂಪುರ, ಒಕ್ಕೂಟದ ಪದಾಧಿಕಾರಿಗಳು, ಮತ್ತಿತರರು

ಉಪಸ್ಥಿತರಿದ್ದರು.


ಪೋಟೋ ಕ್ಯಾಪ್ಶನ್:

ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದಿಂದ 

ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವನ್ನು ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಶ್ರೀ ಬಸವನಾಗಿ ದೇವ ಸ್ವಾಮೀಜಿ, ಸಿದ್ದರಾಮ ಶಿವಯೋಗಿ ಸ್ವಾಮೀಜಿ, ಒಕ್ಕೂಟದ ರಾಜ್ಯ ಸಂಚಾಲಕ ಶಿವಣ್ಣ ಬಿ. ಕನಕಪುರ ದಲಿತ ಸಂಘರ್ಷ ಸಮಿತಿ ರಾಜ್ಯ ಮುಖಂಡರು ಶ್ರೀ ಸಿದ್ದಲಿಂಗಯ್ಯ, ಶ್ರೀ ಸಿದ್ದಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

  

ಕೋಟ್:

ಒಳ ಮೀಸಲಾತಿ ಹಂಚಿಕೆಯಲ್ಲಿ ತಾಂತ್ರಿಕ ಸಮಸ್ಯೆ ಬಂದರೆ ಹಳೆ ಮೀಸಲಾತಿಯ ಆಧಾರದ ಮೇಲೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು. ನಮ್ಮಿಂದ ಸಾಮಾನ್ಯ ವರ್ಗದ ಉದ್ಯೋಗಾಕಾಂಕ್ಷಿಗಳಿಗೆ ತೊಂದರೆ ಆಗಬಾರದು.

- ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ್ ಸ್ವಾಮೀಜಿ, 

ಅಧ್ಯಕ್ಷರು, ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ ಬೆಂಗಳೂರು.


ಕೋಟ್: 

ರಾಜ್ಯದ 2011ರ ಜನಗಣತಿಯನ್ನು ಪರಿಗಣಿಸಿ, ವೈಜ್ಞಾನಿಕವಾಗಿ ತರ್ಕಬದ್ಧ ಒಳ ಮೀಸಲಾತಿ ಮತ್ತು ಪರಿಶಿಷ್ಟ ಜಾತಿಗಳಲ್ಲಿ ಸಮಾನ ಉಪಜಾತಿಗಳ ಗುಂಪುಗಳನ್ನು ಒಟ್ಟುಗೂಡಿಸುವ ಬಗ್ಗೆ ಪರಿಶೀಲಿಸಬೇಕು.

- ಶ್ರೀ ಬಸವನಾಗಿ ದೇವ ಸ್ವಾಮೀಜಿ, ಛಲವಾದಿ ಗುರುಪೀಠ ಸಂಸ್ಥಾನ ಚಿತ್ರದುರ್ಗ


ಬಾಕ್ಸ್:

ಪರಿಶಿಷ್ಟ ಜಾತಿಯ 101 ಸಮುದಾಯಗಳಿಗೆ ಅನ್ಯಾಯವಾಗದಂತೆ ಶುಕ್ರವಾರ ಸಂಜೆ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯ ಪ್ರಮಾಣವನ್ನು ಹಂಚಿಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ ಆಗ್ರಹಿಸಿದೆ.


ಕೋಟ್:

ಒಳ ಮೀಸಲಾತಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾದರೆ, ನಮ್ಮ ಸಮುದಾಯದ ಸಚಿವರು ಹಾಗೂ ಶಾಸಕರು ರಾಜೀನಾಮೆ ನೀಡುವುದು ಖಂಡಿತ.

- ಸಿದ್ದರಾಮ ಶಿವಯೋಗಿ ಸ್ವಾಮಿ, ಬಲಗೈ ಸ್ವಾಮೀಜಿ.

Image Description

Post a Comment

0 Comments