ಬೆಂಗಳೂರು ನಗರ ವಿವಿಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ಅವಮಾನ: ರಾಷ್ಟ್ರೀಯ ಅಂಬೇಡ್ಕರ್ ಸೇನೆ ಖಂಡನೆ
ಬೆಂಗಳೂರು: ಏ. 05: ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ನಡೆದ 5ನೇ ಘಟಿಕೋತ್ಸವದಲ್ಲಿ ಭಾರತದ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅಧ್ಯಕ್ಷರಾದ ಅರ್ಜುನ್ ಗೋಪಾಲಯ್ಯ ಆರೋಪಿಸಿದ್ದಾರೆ.
ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷರಾದ ಅರ್ಜುನ್ ಗೋಪಾಲಯ್ಯ ಅವರು ವಿಶೇಷವಾಗಿ ವಿಶ್ವವಿದ್ಯಾಲಯವು ಅವರ ಹೆಸರನ್ನು ಧರಿಸಿಕೊಂಡಿರುವ ಸಂದರ್ಭದಲ್ಲಿಯೇ, ಅವರಿಗೆ ಸಲ್ಲಬೇಕಾದ ಮೂಲಭೂತ ಗೌರವವನ್ನು ತೋರಿಸದೇ ಇರುವುದು ಕೇವಲ ನಿರ್ಲಕ್ಷ್ಯವಲ್ಲ, ಅದು ಸಂಸ್ಥೆಯ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಸಾರ್ವಜನಿಕ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆ ನಿನ್ನೆ ನಡೆದ ವಿವಿಯ ವಾರ್ಷಿಕ ಘಟಕೋತ್ಸವದಲ್ಲಿ ಕಂಡು ಬಂದಿದೆ.
ಈ ವಿಷಯವು ರಾಜ್ಯದ ಜನತೆ ಹಾಗೂ ಬೌದ್ಧಿಕ ವಲಯದಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅಸಮಾಧಾನವಾಗಿದೆಂದರು.
ಶಿಕ್ಷಣ ಸಂಸ್ಥೆಯಾಗಿ ಸಮಾಜಕ್ಕೆ ಆದರ್ಶವಾಗಬೇಕಾದ ವಿಶ್ವವಿದ್ಯಾಲಯದಲ್ಲೇ ಇಂತಹ ಘಟನೆ ನಡೆದಿರುವುದು ವಿಷಾದನೀಯವಾಗಿದೆ. ಇದ್ದರಿಂದಾಗಿ ಈ ವಿಷಯವನ್ನು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಇಂತಹ ಘಟನೆಗಳು ಮರುಕಳಿಸದಂತೆ ಉನ್ನತ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

.gif)

.gif)


0 Comments