ವೀರಶೈವ ವಿದ್ಯಾವರ್ಧಕ ಸಂಘವು :ರಾಜ್ಯದಲ್ಲಿಯೇ ಪ್ರತಿಷ್ಠಿತ ವಿದ್ಯಾ ಸಂಸ್ಥೆ : ಶಿವಾನಂದ ಶೇಲ್ಲಿಕೇರಿ
ಬಾಗಲಕೋಟೆ ಏಪ್ರಿಲ್ 18: ಉತ್ತರ ಕರ್ನಾಟಕದಲ್ಲಿ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾಗಿರುವ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘವು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಣ ತಜ್ಞರಿಗೆ ಅವಕಾಶಗಳನ್ನು ನೀಡುವುದರ ಮೂಲಕ ಇಡೀ ರಾಜ್ಯದಲ್ಲೇ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶಿವಾನಂದ ಶೆಲ್ಲಿಕೇರಿಯವರು ಅಭಿಪ್ರಾಯಪಟ್ಟರು.
ಅವರು ಇತ್ತೀಚಿಗೆ ಬಸವೇಶ್ವರ ಕಲಾ ಮಹಾವಿದ್ಯಾಲಯದ ನೂತನ ಸಭಾಭವನದಲ್ಲಿ ಏರ್ಪಡಿಸಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಹಾಗೂ ವಾರ್ಷಿಕ ಸಂಚಿಕೆಯ ಬಿಡುಗಡೆ ಮತ್ತು ಕಾಲೇಜಿನ ಮುಖವಾಣಿಯಾದ ಕಲಾವಾಣಿ ಪತ್ರಿಕೆಯ ವಿಶೇಷ ಸಂಚಿಕೆಯ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ನಮ್ಮ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಳ್ಳುತ್ತಿರುವ ಸಾಹಿತ್ಯ ಕಾರ್ಯಕ್ರಮಗಳ ಯಶಸ್ಸಿಗೆ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷರಾದ ಡಾ ವೀರಣ್ಣ ಚರಂತಿಮಠ ಅವರು ಅಪಾರವಾದಂತಹ ಸಹಕಾರ ಮತ್ತು ಪ್ರೋತ್ಸಾಹವನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು. ಈ ವಿದ್ಯಾ ಸಂಸ್ಥೆಯು ವಿದ್ಯಾರ್ಥಿಗಳು ಸಂಸ್ಕಾರವಂತರಾಗಿ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಕಾರ ನೀಡುತ್ತಿದೆ, ಇಲ್ಲಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ತಮ್ಮ ಮುಂದಿನ ಜೀವನದಲ್ಲಿ ಯಶಸ್ಸನ್ನು ಗಳಿಸಬೇಕು ಎಂದು ಅವರು ತಿಳಿಸಿದರು. ಕಳೆದ 28 ವರ್ಷಗಳ ಹಿಂದೆ ನಾನು ಈ ವಿದ್ಯಾ ಸಂಸ್ಥೆ ಯಲ್ಲಿ ವಿದ್ಯಾರ್ಥಿಯಾಗಿ ಕಳೆದ ಜೀವನವು ಇಂದು ಸ್ಮರಣೆಗೆ ಬರುತ್ತಿದೆ ಎಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯರಾದ ಪ್ರೊ ಎಸ್ ಆರ್ ಮೂಗನೂರು ಮಠ ಅವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಗೆಲುವು ಕೇವಲ ಪ್ರಮಾಣ ಪತ್ರದಲ್ಲಿ ಸಿಗುವುದಿಲ್ಲ, ಅದು ಅವರು ಮಾಡುತ್ತಿರುವ ನಿರಂತರ ಪ್ರಯತ್ನ ಸತತ ಅಧ್ಯಯನಶೀಲತೆ ಇವುಗಳಿಂದ ಸಿಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಕಲಾ ದೀಪ್ತಿ ವಾರ್ಷಿಕ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು ಹಾಗೂ ಮಹಾವಿದ್ಯಾಲಯದ ಮುಖವಾಣಿ ಕಲಾವಾಣಿ ಪಾಕ್ಷಿಕ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯ ಮಟ್ಟದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಹಾಗೂ ವಿಶೇಷ ಸಾಧನೆ ಮಾಡಿದ ಪ್ರಾಧ್ಯಾಪಕರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಕಲಾವಾಣಿ ಪಾಕ್ಷಿಕ ಪತ್ರಿಕೆಯ ಸಂಪಾದಕ ಮಂಡಳಿಯ ಸದಸ್ಯರು ಹಾಗೂ ಕಲಾ ದೀಪ್ತಿ ವಾರ್ಷಿಕ ಸಂಚಿಕೆಯ ಸಂಪಾದಕ ಮಂಡಳಿ ಸದಸ್ಯರು ಹಾಗೂ ಐ ಕ್ಯೂ ಎ ಸಿ ಸಂಯೋಜಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಮಾರಿ ದೀಪಾ ಮತ್ತು ಕುಮಾರಿ ಕಾವ್ಯ ಕುಮಾರಿ ಅಂಜಲಿ ಮತ್ತು ಸಂಗಡಿಗರು ಪ್ರಾರ್ಥಿಸಿದರು . ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಡಾ ಕೆ ವಿ ಮಠ ಅವರು ಸ್ವಾಗತಿಸಿ ಪರಿಚಯ ಭಾಷಣ ಮಾಡಿದರು. ಡಾ ಕೆಂಗಲ ಗುತ್ತಿಯವರು ವಾರ್ಷಿಕ ವರದಿ ವಾಚನ ಮಾಡಿದರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ ಎಂ ಎಂ ದೇವನಾಳ ಅವರು ವಂದಿಸಿದರು. ಸಂಗೀತ ವಿಭಾಗದ ಡಾ.ರೇವಣಸಿದ್ದೇಶ್ವರ ಬೆಣ್ಣೂರ ಅವರು ಕಾರ್ಯಕ್ರಮ ನಿರೂಪಿಸಿದರು.
ವರದಿ : ಡಾ. ವಿಲಾಸ ಕಾಂಬಳೆ
ದೇಹ ದಾನಿಗಳ ಗ್ರಾಮ
ಶೇಗುಣಸಿ
ಮೋ: 9591782353

.gif)

.gif)


0 Comments