ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾರ್ಥಿ ನರಸಿಂಹಪ್ಪ ಜೆ. ರವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಬೆಂಗಳೂರು ವಿವಿ: ನರಸಿಂಹಪ್ಪ ಜೆ. ರವರಿಗೆ ಪಿಎಚ್.ಡಿ ಪದವಿ ಪ್ರದಾನ
ಪಾತಬಲ್ಲಪಲ್ಲಿ ಗ್ರಾಮದ ನರಸಿಂಹಪ್ಪ ಜೆ. ರವರಿಗೆ ಪಿಎಚ್.ಡಿ ಪದವಿ ಪ್ರದಾನ
ಕೋಲಾರ: ಜೂ.20: ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾತಬಲ್ಲಪಲ್ಲಿ ಗ್ರಾಮದ ನಿವಾಸಿ ಶ್ರೀಮತಿ ಸರಸಮ್ಮ ಮತ್ತು ಜಯರಾಮಪ್ಪ ದಂಪತಿಯ ಕಿರಿಯ ಪುತ್ರ, ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ನರಸಿಂಹಪ್ಪ ಜೆ. ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಡೊಮಿನಿಕ್ ಡಿ. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ "ಕರೋನಾ ಸನ್ನಿವೇಶದಲ್ಲಿ ಕನ್ನಡದಲ್ಲಾಗಿರುವ ನುಡಿಪಲ್ಲಟಗಳು" ಎಂಬ ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಇದೇ ವೇಳೆಯಲ್ಲಿ ನರಸಿಂಹಪ್ಪ ಜೆ. ರವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಹಾಗೂ ಪಾತಬಲ್ಲಪಲ್ಲಿ ಗ್ರಾಮದ ಸುತ್ತಮುತ್ತಲಿನವರು ಶುಭಕೋರಿ, ಅಭಿನಂದನೆ ಸಲ್ಲಿಸಿದ್ದಾರೆ.
ವರದಿ : ಡಾ. ವಿಲಾಸ ಕಾಂಬಳೆ
ದೇಹ ದಾನಿಗಳ ಗ್ರಾಮ
ಶೇಗುಣಶಿ
ಮೋ: 9591782353

.gif)

.gif)


0 Comments