*ಸಾಹಿತ್ಯ ಸಾಧನೆಗೆ “ಸಾಧನ ತಪಸ್ವಿ” ಗೌರವದ ಗರಿ:*
*ಖ್ಯಾತ ಲೇಖಕಿ ವಿದ್ಯಾ ರೆಡ್ಡಿಗೆ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ*
ಗೋಕಾಕ: ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಗೋಕಾಕದ ಖ್ಯಾತ ಲೇಖಕಿ ಶ್ರೀಮತಿ ವಿದ್ಯಾ ರೆಡ್ಡಿ ಅವರಿಗೆ ಪ್ರತಿಷ್ಠಿತ “ಸಾಧನ ತಪಸ್ವಿ” ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಸ್ವರ ಸಾಧನ ಸಂಗೀತ ವಿದ್ಯಾಲಯದ ವತಿಯಿಂದ ಉಭಯಗಾನ ವಿಶಾರದ ಲಿಂ. ಪಂಡಿತ ಪಂಚಾಕ್ಷರಿ ಗವಾಯಿಗಳು ಹಾಗೂ ಪದ್ಮಭೂಷಣ ಲಿಂ. ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಪುಣ್ಯಸ್ಮರಣೋತ್ಸವದ ಅಂಗವಾಗಿ ಜೂನ್ 21ರಂದು ಗೋಕಾಕದ ರೋಟರಿ ರಕ್ತ ಭಂಡಾರದ ಸಭಾಂಗಣದಲ್ಲಿ ನಡೆಯುವ “ಸ್ವರಾಭಿಷೇಕ” ಕಾರ್ಯಕ್ರಮದಲ್ಲಿ ಈ ಗೌರವವನ್ನು ನೀಡಿ ಸನ್ಮಾನಿಸಲಾಗುವುದು.
ಕಾದಂಬರಿ, ಕವನ, ಕಥೆ, ಚುಟುಕು, ಲೇಖನ ಹಾಗೂ ವಿಮರ್ಶೆ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಹಲವು ಕೃತಿಗಳನ್ನು ರಚಿಸಿರುವ ವಿದ್ಯಾ ರೆಡ್ಡಿ ಅವರು ತಮ್ಮ ಸೃಜನಶೀಲ ಬರವಣಿಗೆಯ ಮೂಲಕ ಸಾಹಿತ್ಯ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಸಾಹಿತ್ಯದ ಜೊತೆಗೆ ಸಮಾಜಮುಖಿ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವು ಪ್ರಶಸ್ತಿ-ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.
ಪ್ರಸ್ತುತ ಪೌರಾಡಳಿತ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅವರು, ವಿವಿಧ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸಂಘಟನೆಗಳ ಮೂಲಕ ತಮ್ಮ ಸೇವಾ ಚಟುವಟಿಕೆಗಳನ್ನು ಮುಂದುವರಿಸಿದ್ದಾರೆ.
ತಮ್ಮದೇ ತವರೂರಾದ ಗೋಕಾಕದಲ್ಲಿ ದೊರೆಯುತ್ತಿರುವ ಈ ಗೌರವವು ಅವರ ಸಾಹಿತ್ಯಿಕ ಸಾಧನೆಗೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದ್ದು, ಸಾಹಿತ್ಯಾಸಕ್ತರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ವರದಿ:ಡಾ. ಜಯವೀರ ಎ. ಕೆ.
ಖೇಮಲಾಪುರ

.gif)

.gif)


0 Comments