ಬೆಂಗಳೂರು ವಿವಿ: ಯೋಗ ಕೇಂದ್ರದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಯೋಜನೆ
ಇಂದು ಯೋಗ ಕೇಂದ್ರದಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಬೆಂಗಳೂರು, ಜೂ.20: ಬೆಂಗಳೂರು ವಿಶ್ವವಿದ್ಯಾಲಯದ ಯೋಗ ಕೇಂದ್ರದಿಂದ ಹಮ್ಮಿಕೊಂಡಿರುವ 12 ನೇಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರದರ್ಶನ ಕಲಾ ವಿಭಾಗ (ಕಲಾಭವನದ) ಆವರಣದಲ್ಲಿ ಭಾನುವಾರ ಬೆಳಗ್ಗೆ 6.30 ಗಂಟೆಗೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಯೋಗ ಕೇಂದ್ರದ ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಣ್ಣ ಎಸ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ವಿವಿಯ ಕುಲಪತಿಗಳಾದ ಪ್ರೊ. ಡಾ. ಜಯಕರ್ ಎಸ್.ಎಂ ಅವರು ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಪ್ರದರ್ಶನ ಕಲಾ ವಿಭಾಗದ ಹಿರಿಯ ಪ್ರಾಧ್ಯಾಪಕರು ಮತ್ತು ಡಾ. ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯ ಮೈಸೂರಿನ ನಿಕಟಪೂರ್ವ ಕುಲಪತಿಗಳಾದ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ, ವಿವಿಯ ಕುಲಸಚಿವರು (ಮೌಲ್ಯಮಾಪನ) ಪ್ರೊ. ಚಂದ್ರಕಾಂತ್ ಎಸ್. ಕರಿಗಾರ್, ಹಿರಿಯ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥೆ ಹಂಸಿನಿ ನಾಗೇಂದ್ರ, ಎನ್ಎಸ್ಎಸ್ ನ ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕ ಡಾ. ರಮೇಶ್ ಕಿತ್ತೂರ್,
ವಿಭಾಗದ ಮುಖ್ಯಸ್ಥರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.
ವರದಿ : ಡಾ. ವಿಲಾಸ ಕಾಂಬಳೆ
ದೇಹ ದಾನಿಗಳ ಗ್ರಾಮ
ಶೇಗುಣಶಿ
ಮೋ:9591782353

.gif)

.gif)


0 Comments