ಸಹಾಯಕ ಪ್ರಾಧ್ಯಾಪಕ ಶಿವಪ್ಪ ಎನ್ ರವರಿಗೆ ಪಿಎಚ್.ಡಿ ಪದವಿ ಪ್ರದಾನ

 ಸಹಾಯಕ ಪ್ರಾಧ್ಯಾಪಕ ಶಿವಪ್ಪ ಎನ್ ರವರಿಗೆ ಪಿಎಚ್.ಡಿ ಪದವಿ ಪ್ರದಾನ




ಶಿವಪ್ಪ ಎನ್ ರವರಿಗೆ ಡಾಕ್ಟರೇಟ್ ಪದವಿ ಪ್ರದಾನ


ಕೋಲಾರ: ಜೂ.08: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪುತ್ತೇರಿ ಗ್ರಾಮದ ಶ್ರೀಮತಿ ವೈಲಮ್ಮ ಮತ್ತು ದಿವಂಗತ ನಾಗರಾಜಪ್ಪ ದಂಪತಿಯ ಹಿರಿಯ ಪುತ್ರ ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಂಶೋಧನಾರ್ಥಿ  ಶಿವಪ್ಪ ಎನ್ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.


ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ವೆಂಕಟರಮಣಪ್ಪ ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ಎ ಸೋಶಿಯಲಾಜಿಕಲ್ ಸ್ಟಡಿ ಆಫ್ ಕೆ.ಸಿ. (ಕೋರಮಂಗಲ ಚಲ್ಲಘಟ್ಟ) ವ್ಯಾಲಿ ವಾಟರ್ ಪ್ರಾಜೆಕ್ಟ್ ಇನ್ ಕೋಲಾರ ಡಿಸ್ಟ್ರಿಕ್ಟ್" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.


ಪ್ರಸ್ತುತ ಶ್ರೀ ಶಿವಪ್ಪ ಎನ್ ಅವರು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿರುವ ಸಿ.ಜಿ. ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದೇ ಸಂದರ್ಭದಲ್ಲಿ ಶಿವಪ್ಪ ಎನ್  ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಕಾಲೇಜಿನ ಸಿಬ್ಬಂದಿ ವರ್ಗದವರು, ಗುರು-ಹಿರಿಯರು, ಸ್ನೇಹಿತರು ಶುಭಕೋರಿ, ಅಭಿನಂದನೆ ಸಲ್ಲಿಸಿದ್ದಾರೆ.


ವರದಿ : ಡಾ. ವಿಲಾಸ ಕಾಂಬಳೆ 

ದೇಹ ದಾನಿಗಳ ಗ್ರಾಮ ಶೇಗುಣಶಿ 

ಮೋ: 9591782353

Image Description

Post a Comment

0 Comments